Recent Posts

Tuesday, January 21, 2025
ಸುದ್ದಿ

*ನಳಿನ್ ಕುಮಾರ್ ಕಟೀಲ್ ಮತ್ತು ಡಿವಿ ಸದಾನಂದ ಗೌಡರಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ಅಳವಡಿಸಿದ ಆರೋಪಿಗಳ ಬಂಧನ -ಕಹಳೆ ನ್ಯೂಸ್*

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹಾಗೂ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತರನ್ನು ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್ ಹಾಗೂ ಮಾಧವ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ನಗರಸಭೆ ಆಯುಕ್ತ ಮಧು ಎಸ್. ಮನೋಹರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.

ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಅವರನ್ನು ಬಿಜೆಪಿ ಸೋಲಿಗೆ ಹೊಣೆಯಾಗಿಸಿ, ಅವಹೇಳನ ಮಾಡಲಾಗಿತ್ತು. ಮಾತ್ರವಲ್ಲ ಭಾವಪೂರ್ಣ ಶ್ರದ್ಧಾಂಜಲಿ ಶೀರ್ಷಿಕೆಯನ್ನು ನೀಡಲಾಗಿತ್ತು.

ಇದಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಇದರ ಬಗ್ಗೆ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಸಂಜೆ ವೇಳೆಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಸ್ವಿಯಾಗಿದ್ದಾರ.