ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜಿಲಾಡಿ ಪ್ರದೇಶದ ಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು ಇಲ್ಲಿನ ಜನರಲ್ಲಿ ಆತಂಕ ಮನೆ ಮಾಡಿದೆ.
ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ ದೊಡ್ಡ ಆನೆಯೊಂದು ಸಂಚರಿಸುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಸಮೀಪದ ಮೀನಾಡಿ ಎಂಬಲ್ಲಿ ಫೆಬ್ರವರಿ ತಿಂಗಳಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದು ಇಡೀ ಊರಿಗೆ ಊರೇ ಬೆಚ್ಚಿ ಬಿದ್ದಿತ್ತು. ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೆ ಆನೆಗಳು ಪ್ರತ್ಯಕ್ಷವಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮರಿಯಾನೆಯೊಂದು ತಾಯಿ ಆನೆಯ ಜೊತೆ ಸಾಗುತ್ತಿರುವ ವೀಡಿಯೋವನ್ನು ಸ್ಥಳೀಯರೇ ಮೊಬೈಲ್‌ನಲ್ಲಿ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.