Recent Posts

Sunday, January 19, 2025
ಸುದ್ದಿ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಆರೋಪ ಸಾಬೀತು: ಆರೋಪಿಗೆ ಜೈಲು ಶಿಕ್ಷೆ – ಕಹಳೆ ನ್ಯೂಸ್

ಉಡುಪಿ:  ಕಾರ್ಕಳದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಮೂರು ವರ್ಷದ ಹಿಂದೆ ಅತ್ಯಾಚಾರಗೈದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯ ತೀರ್ಪು ನೀಡಿದೆ.

ಕಾರ್ಕಳ ಕಲ್ಯಗ್ರಾಮ ಕುಂದ್ರಬೆಟ್ಟುವಿನ ಗಣೇಶ್ ಪೂಜಾರಿ ಅಲಿಯಾಸ್ ಅಣ್ಣು ಅಪರಾಧಿ. ಕೃಷಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಈತ ಅತ್ಯಾಚಾರ ಪ್ರಕರಣದ ಬಳಿಕ ಜಾಮೀನು ಸಿಗದೆ ಈಗಲೂ ಜೈಲುವಾಸ ಅನುಭವಿಸುತ್ತಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣ ಕುರಿತು ಅಂದಿನ ಕಾರ್ಕಳ ಠಾಣೆ ವೃತ್ತ ನಿರೀಕ್ಷಕ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

27 ಸಾಕ್ಷಿಗಳಲ್ಲಿ 21 ಸಾಕ್ಷಿಗಳ ವಿಚಾರಣೆ ನಡೆಸಿರುವ ನ್ಯಾಯಾಲಯ ಹೇಳಿಕೆ ಪಡೆದುಕೊಂಡಿದೆ. 10 ವರ್ಷ ಜೈಲು, ಆರೋಪಿಯು ನೊಂದ ಬಾಲಕಿಗೆ 25 ಸಾವಿರ ರೂ. ಪರಿಹಾರ ನೀಡುವಂತೆ ನ್ಯಾಯಾಧೀಶ ವೆಂಕಟೇಶ ನಾಯ್ಕ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಶಾಂತಿ ಬಾಯಿ ಅಭಿಯೋಜನೆ ಪರ ವಾದ ಮಂಡಿಸಿದ್ದರು.

ಬುದ್ಧಿಮಾಂದ್ಯ ಯುವತಿ 2016 ಜುಲೈ 14ರಂದು ಮನೆಯಲ್ಲಿ ಒಬ್ಬಳೇ ಇದ್ದಾಗ ಅಪರಾಹ್ನ 3 ಗಂಟೆ ಸುಮಾರಿಗೆ ಆರೋಪಿ ಗಣೇಶ್ ಪೂಜಾರಿ ಮನೆಗೆ ಆಗಮಿಸಿ ಅತ್ಯಾಚಾರ ನಡೆಸಿದ್ದಾನೆ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಯುವತಿಗೆ ಬೆದರಿಕೆ ಒಡ್ಡಿದ್ದ. ಘಟನೆ ಬಳಿಕ ಮನೆಯವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಆರೋಪಿಯನ್ನು ಮರುದಿನವೇ ಬಂಧಿಸಿದ್ದರು.