ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊರ್ವ ಮೋಟಾರ್ ಬೈಕ್ ನ್ನು ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 79/2023 ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.
ಇನ್ನು ಈ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ ಎಂಬಾತನನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ನಾಗರಾಜ್ ಹೆಚ್ ಅವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜರವರು ಭಾಗವಹಿಸಿದ್ದಾರೆ.