Friday, January 24, 2025
ಸುದ್ದಿ

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು : ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಇದೀಗ ಹೈಕಮಾಂಡ್ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರನ್ನ ಆಯ್ಕೆ ಮಾಡಿದ್ದಾರೆ.

ಈ ಹಿನ್ನಲೆ ಕುಮಾರಕೃಪಾ ಬಳಿ ಇರುವ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡುತ್ತಿರುವ ಹಿನ್ನೆಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದ್ದು, ಬೆಂಗಳೂರಿನ ಹಲವು ಕಡೆ ಸಿದ್ದರಾಮಯ್ಯ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಫಿಕ್ಸ್ ಆಗಿದೆ. ಇಂದು ನಡೆಯಲಿರುವ ಹೈ ವೋಲ್ಟೇಜ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.