Monday, November 25, 2024
ಸುದ್ದಿ

ಪೊಲೀಸ್ ಗೂಂಡಾಗಿರಿಗೆ ಸಾಕ್ಷಿಯಾದ ಪುತ್ತೂರು : ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣದ ಆರೋಪಿಗಳಿಗೆ ಪೊಲೀಸ್ ಠಾಣೆಯಲ್ಲಿ ಹಿಗ್ಗಾಮುಗ್ಗ ಥಳಿತ-ಕಹಳೆ ನ್ಯೂಸ್

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬAಧಿಸಿದAತೆ ಒಂಬತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆಯ ನೆಪದಲ್ಲಿ ಅವರನ್ನು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿದ್ದಾರೆ.

ಮೇ14 ರ ರಾತ್ರಿ ವೇಳೆ ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವುಳ್ಳ ಬ್ಯಾನರ್ ಅನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಆ ಬ್ಯಾನರ್‌ನಲ್ಲಿ ಬಿಜೆಪಿ ಸೋಲಿಗೆ ಕಾರಣವಾದ ನಾಯಕರಿಗೆ ಶ್ರದ್ಧಾಂಜಲಿ ಎಂದು ಬರೆಯಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಪುತ್ತೂರು ನಗರ ಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಪುತ್ತೂರು ನಗರ ಠಾಣೆಗೆ ಸರ್ಕಾರಿ ಆಸ್ತಿಪಾಸ್ತಿಯನ್ನು ಮತ್ತು ಸಾರ್ವಜನಿಕ ಸ್ಥಳವನ್ನು ವಿರೂಪಗೊಳಿಸಿರುವುದಾಗಿ ದೂರು ನೀಡಿದ್ದರು. ಮೇ.15 ರಂದು ಈ ಬ್ಯಾನರ್ ಅಳವಡಿಕೆಯ ವಿರುದ್ಧ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆಯನ್ನು ನಡೆದಿತ್ತು.

ನರಿಮೊಗರು ಗ್ರಾಮದ ನಿವಾಸಿಗಳಾದ ವಿಶ್ವನಾಥ್, ಮಾಧವ ಎಂಬವರನ್ನು ಮೊದಲು ವಶಕ್ಕೆ ಪಡೆದುಕೊಂಡ ಪೊಲೀಸರು ಮೇ.15 ರಂದು ರಾತ್ರಿ ನರಿಮೊಗರು ನಿವಾಸಿಗಳಾದ ಅಭಿ (ಅವಿನಾಶ್), ಶಿವರಾಮ್, ಚೈತ್ರೆಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ರನ್ನು ವಶಕ್ಕೆ ಪಡೆದುಕೊಂಡಿದ್ರು. ಇದೀಗ ವಿಚಾರಣೆ ನೆಪದಲ್ಲಿ ವಶಕ್ಕೆ ಪಡೆದವರ ಮೇಲೆ ಅಮಾನವೀಯ ರೀತಿಯಾಗಿ ಥಳಿಸಿ ವಿಕೃತಿ ಮೆರೆದಿದ್ದಾರೆ.
ಡಿವೈಎಸ್ಪಿ ಕಛೇರಿಯಿಂದ ಹೊರ ಬರುವ ವೇಳೆ ನಡೆದಾಡಲೂ ಕಷ್ಟ ಪಡುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತ ಇದ್ದು, ಸಾರ್ವಜನಿಕ ವಲಯದಲ್ಲಿ ಪೊಲೀಸರ ಗೂಂಡಾಗಿರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗ್ತ ಇದೆ