Thursday, January 23, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

‘ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದು ಖಂಡನೀಯ’ ; ಪೋಲೀಸ್ ದೌರ್ಜನ್ಯದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಪ್ರತಿಕ್ರಿಯಿಸಿದ್ದಾರೆ.

‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು