Monday, November 25, 2024
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ ; ಮಧ್ಯಾಹ್ನ ಮೂರು ಗಂಟೆಯ ಒಳಗೆ, ಯುವಕರಿಗೆ ಅಮಾನವೀಯ ಹಲ್ಲೆ ನಡೆಸಿದ ತಪ್ಪಿತಸ್ಥ ಪೊಲೀಸರನ್ನು ಸಸ್ಫೆಂಡ್ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ; ಇಲಾಖೆಗೆ ಖಡಕ್ ಆದೇಶ ನೀಡಿದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

 

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಇಂದು ಮಧ್ಯಾಹ್ನ ಮೂರು ಗಂಟೆಯ ಒಳಗೆ, ಯುವಕರಿಗೆ ಅಮಾನವೀಯ ಹಲ್ಲೆ ನಡೆಸಿದ ತಪ್ಪಿತಸ್ಥ ಪೊಲೀಸರನ್ನು ಸಸ್ಫೆಂಡ್ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಶಾಸಕ ಅಶೋಕ್ ಕುಮಾರ್ ರೈ ಇಲಾಖೆಗೆ ಖಡಕ್ ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಪೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ಸತ್ಯಾಂಶದ ಬಗ್ಗೆ ಸಂಬಂಧಪಟ್ಟವರ ಜೊತೆ ಮಾಹಿತಿ ಪಡೆದುಕೊಳ್ಳುವೆ. ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.