ಬೆಂಗಳೂರು: ಜಿಮ್ ಟ್ರೈನರ್ ಗೆ ಹಲ್ಲೆ ನಡೆಸಿದ ಪ್ರಕರಣದ ಮೇಲೆ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಜಿಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಹೇಶ್ ಬಾಬು ಅವರು, ವಿಜಯ್ ಮತ್ತು ಅವರ ಸಹಚರರ ಜಾಮೀನು ತಿರಸ್ಕರಿಸಿ ತೀರ್ಪು ನೀಡಿದರು. ಮೇಲಿನ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ವಿಜಯ್ ಪರ ವಕೀಲರು ತಿಳಿಸಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.23ರಂದು ವಿಜಯ್ ಬಂಧಿಸಲಾಗಿತ್ತು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಜಾಮೀನಿಗಾಗಿ ವಿಜಯ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.
ಜಿಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ವಿಜಯ್, ಚಾಲಕ ಪ್ರಸಾದ್, ಮಣಿ ಮತ್ತು ಪ್ರಸಾದ್ ಆರೋಪಿಗಳಾಗಿದ್ದಾರೆ.