Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಚಿವ ಸ್ಥಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ – ಕಹಳೆ ನ್ಯೂಸ್

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ಸೋಲಿಸಿ 135 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷ ಇದೀಗ ಏಕಾಂಗಿಯಾಗಿ ಸರ್ಕಾರ ರಚಿಸಲು ಮುಂದಾಗಿದೆ.

ಕಳೆದ ಶನಿವಾರ, ಮೇ 13ರಂದು ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ ಪಕ್ಷದಲ್ಲಿ ದೊಡ್ಡ ಪೈಪೋಟಿಯೇ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ವರಿಷ್ಠರ ಮುಂದೆ ಪಟ್ಟು ಬಿಗಿಗೊಳಿಸಿದ್ದರು. ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹೆಣೆದ 30:30 ಫಾರ್ಮಲಾಗೆ ಉಭಯ ನಾಯಕರು ಒಪ್ಪಿಗೆ ಸೂಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರ, ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಯಾಗಿಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ ಹಾಗೂಡಿ.ಕೆ. ಶಿವಕುಮಾರ್ಸಚಿವ ಸಂಪುಟ ಸೇರುವವರ ಪಟ್ಟಿ ಹಿಡಿದು ಮತ್ತೆ ದೆಹಲಿಗೆ ತೆರಳಿದ್ದಾರೆ. ತಮ್ಮ ಬೆಂಬಲಿಗ ಶಾಸಕರಿಗೆ ಮಂತ್ರಿ ಸ್ಥಾನ ಪಡೆಯಲು ಮತ್ತೊಂದು ಸುತ್ತಿನ ಪೈಪೋಟಿ ನಡೆಸಲಿದ್ದಾರೆ.

ಒಂದು ಕಡೆ ಪ್ರಮಾಣ ವಚನ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಸಚಿವ ಸ್ಥಾನದ ಲಾಬಿಗಾಗಿ ಕೆಲವುಕಾಂಗ್ರೆಸ್ಶಾಸಕರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಎಡತಾಕುತ್ತಿರುವ ಶಾಸಕರ ಪಟ್ಟಿ ಇಲ್ಲಿದೆ.

ಶಿವರಾಜ್ ತಂಗಡಗಿ

ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಜ್ ತಂಗಡಗಿ ಅವರು ಈ ಬಾರಿಯ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಣ್ಣ ನೀರಾವರಿ ಖಾತೆ ಸಚಿವರಾಗಿದ್ದರು. ಭೋವಿ ಸಮುದಾಯಕ್ಕೆ ಸೇರಿರುವ ಶಿವರಾಜ್ ತಂಗಡಗಿ ಅವರು ಈ ಬಾರಿಯೂ ತಮಗೆ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದುಂಬಾಲು ಬಿದ್ದಿದ್ದಾರೆ.

ಎಸ್.ಎಸ್. ಮಲ್ಲಿಕಾರ್ಜುನ

ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಗನಾಗಿದ್ದಾರೆ. ತಂದೆ-ಮಗ ಇಬ್ಬರೂ ಆಯ್ಕೆಯಾಗಿದ್ದಾರೆ. ವೀರಸೈವ ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡನಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ಅವರು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಸಚಿವ ಸ್ಥಾನಕ್ಕಾಗಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅಜಯ್ ಸಿಂಗ್

ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಕೂಡ ಈ ಬಾರಿ ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಜಯ್ ಸಿಂಗ್ ಮಂತ್ರಿ ಸ್ಥಾನಕ್ಕಾಗಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಲು ಪ್ರಯತ್ನ ನಡೆಸಿದ್ದಾರೆ. ವಾಸ್ತವಾಗಿ ಅಜಯ್ ಸಿಂಗ್ ಅವರು ಮಾಜಿ ಸಿಎಂ ದಿ. ಧರಂ ಸಿಂಗ್ ಅವರ ಪುತ್ರನಾಗಿದ್ದಾರೆ. ಧರಂ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಆಪ್ತ ಸ್ನೇಹಿತರಾಗಿದ್ದರು. ತಮ್ಮ ಮಗನ ಜೊತೆಗೆ ಆಪ್ತನ ಮಗನಿಗೂ ಸಚಿವ ಸ್ಥಾನ ನೀಡುತ್ತಾರಾ ಎಂಬ ಕುತೂಹಲ ಎಲ್ಲರಿಗಿದೆ.

ಬಿ. ನಾಗೇಂದ್ರ

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕೂಡ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಸೇರಿರುವ ಬಿ. ನಾಗೇಂದ್ರ ಈ ಬಾರಿ ಅದೇ ಸಮುದಾಯದ ಪ್ರಭಾವಿ ನಾಯಕ ಬಿ. ಶ್ರೀರಾಮುಲು ಅವರನ್ನು ಸೋಲಿಸಿದರು. ನಾಲ್ಕನೇ ಬಾರಿಗೆ ಶಾಸಕರಾಗಿದ್ದು, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಸಚಿವ ಸಂಪುಟ ಪ್ರಮಾಣ ವಚನಕ್ಕೂ ಮುನ್ನ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ಹೈಕಮಾಂಡ್ ನಾಯಕರ ಮೊರೆ ಹೋಗಿದ್ದಾರೆ.

ಕೆ.ಎನ್. ರಾಜಣ್ಣ

ತುಮಕೂರು ಜಿಲ್ಲೆ ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರು. ತಾನೂ ಸಚಿವ ಸ್ಥಾನ ಪ್ರಬಲ ಆಕಾಂಕ್ಷಿ ಎಂದು ಈ ಮೊದಲೇ ಹೇಳಿದ್ದರು. ಇವರೂ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದ್ದು, ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿದ್ದು, ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.