Recent Posts

Monday, January 20, 2025
ಸುದ್ದಿ

ಗ್ರಾಹಕನ ನೆಪದಲ್ಲಿ ಹೊಟೇಲ್ ಗೆ ಆಗಮಿಸಿದ ಕಳ್ಳರು; ಮಾಲಕಿಯ ಕರಿಮಣಿ ಎಗರಿಸಿದ ಖದೀಮರು –ಕಹಳೆ ನ್ಯೂಸ್

ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ಹೊಟೇಲ್ ಮಾಲಕಿಯ ಸುಮಾರು 15 ಗ್ರಾಂ ತೂಕದ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳ್ಳಿಗೆ ಗ್ರಾಮದ ಪಚ್ಚಿನಡ್ಕ ನಿವಾಸಿ ಆಶಾ ಅವರು ತಮ್ಮ ಪತಿಯ ಜತೆ ಸೇರಿ ಪಚ್ಚಿನಡ್ಕದಲ್ಲಿ ಹೊಟೇಲ್ ನಡೆಸುತ್ತಿದ್ದು, ತಿಂಡಿ ತಯಾರಿಸುತ್ತಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕಿನಲ್ಲಿ ಬಂದಿದ್ದಾರೆ. ಸಹಸವಾರ ಹೆಲ್ಮೆಟ್ ಧರಿಸಿ ಹೊಟೇಲಿಗೆ ಬಂದು ಆಶಾ ಅವರಲ್ಲಿ ಸಿಗರೇಟ್ ಕೇಳಿ ಪಡೆದು ಅದನ್ನು ಹೊರಗೆ ನಿಂತಿದ್ದ ಬೈಕ್ ಸವಾರನಿಗೆ ನೀಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮತ್ತೆ ಆಗಮಿಸಿ ಚುಯಿಂಗ್ ಗಮ್ ಹಾಗೂ ಸೋಡಾ ಕುಡಿಯಲು ಕೇಳಿ ಖಾಲಿ ಬಾಟಲಿಯನ್ನು ಟೇಬಲ್‌ನಲ್ಲಿ ಇರಿಸಿ, ಪಕ್ಕದಲ್ಲೇ ನಿಂತಿದ್ದ ಆಶಾ ಅವರ ಕುತ್ತಿಗೆಗೆ ಕೈಹಾಕಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಬಲಾತ್ಕಾರವಾಗಿ ಎಳೆದುಕೊಂಡು ಬೈಕಿನಲ್ಲಿ ಪರಾರಿಯಾಗಿದ್ದಾನೆ.

ಸುಮಾರು 15 ಗ್ರಾಂ ತೂಕದ ಕರಿಮಣಿ ಸರದ ಮೌಲ್ಯ 75 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.