Recent Posts

Monday, January 20, 2025
ಬೆಂಗಳೂರುರಾಜಕೀಯಸುದ್ದಿ

ಕಾಂಗ್ರೆಸ್ 5 ಗ್ಯಾರಂಟಿಗಳು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ –ಕಹಳೆ ನ್ಯೂಸ್

ಇಂದಿನಿAದಲೇ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆದಿದೆ. ಮೊದಲ ಸಂಪುಟ ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಮೊದಲ ಸಂಪುಟ ಸಭೆಯಲ್ಲೇ ನಾವು ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿಗಳಿಗೆ ಒಪ್ಪಿಗೆ ಸಿಕ್ಕಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

ನಾವು ನುಡಿದಂತೆ ನಡೆಯುತ್ತೇವೆ. ಈ ಹಿಂದೆಯೂ ಅಧಿಕಾರದಲ್ಲಿದ್ದಾಗ ನೀಡಿದ್ದ 160ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿ ನೀಡದ ಕೆಲವು ಹೆಚ್ಚುವರಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಈ ವಿಚಾರ ಪ್ರಸ್ತಾಪದ ಹಿಂದಿನ ಉದ್ದೇಶ ವಿರೋಧ ಪಕ್ಷಗಳು ಹೇಳಿದಂತೆ ನಮ್ಮ ಮಾತು ತಪ್ಪಲ್ಲ. ಜನರಿಗೆ ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂಬ ಭರವಸೆ ಇದೆ ಎಂದರು.
ಕಾAಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಗ್ಯಾರಂಟಿಗಳ ಜಾರಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಒಪ್ಪಿಗೆ ಪಡೆದುಕೊಂಡಿದ್ದೇವೆ. ಇದಕ್ಕಾಗಿ ಸುಮಾರು 50 ಸಾವಿರ ಕೋಟಿ ಹಣ ಬೇಕಿದೆ ಎಂದರು.