Tuesday, January 21, 2025
ಸುದ್ದಿ

ಬ್ಯಾನರ್ ಪ್ರಕರಣ : ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಕಾರ್ಯಕರ್ತರ ಜೊತೆ ಮಾತನಾಡಿದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂಬ ವಿಷಯ ಸತ್ಯಕ್ಕೆ ದೂರವಾದ ಮಾತು. ನಮ್ಮಿಂದ ಆಗುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ನನ್ನ ಕ್ಷೇತ್ರದಲ್ಲಿ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ,ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಮ್ ಕೆ.ವಿ ಸಹಿತ ಹಲವು ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು..