Monday, January 20, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ – ಇಂದು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು, ಮೇ 23 : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.

ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಅಚ್ಚರಿ ಎಂಬಂತೆ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ. ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಮೊದಲ ಎರಡು ವರ್ಷಗಳಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಖಾದರ್ ಕೂಡಾ ತನ್ನ ಒಪ್ಪಿಗೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಆದರೆ ಮಂತ್ರಿ ಹುದ್ದೆಗೆ ಪಟ್ಟು ಹಿಡಿದು ಅವರ್ಯಾರು ಒಪ್ಪದ ಕಾರಣ ಯು.ಟಿ ಖಾದರ್ ಹೆಸರು ಅಂತಿಮವಾಗಿದೆ. ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಂಗಳವಾರ ಖಾದರ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಸಚಿವರಾಗಿ ಅನುಭವಾಗಿಯುರವ ಇವರು 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023 ರ ವರೆಗೆ ಕಾರ್ಯ ನಿರ್ವಹಿಸಿ ಸರಕಾರದ ನ್ಯೂನತೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಗಮನ ಸೆಳೆದಿದ್ದರು.