Wednesday, January 22, 2025
ಸುದ್ದಿ

ಡಿಸಿಎಂ ಡಿ.ಕೆ.ಶಿ ಎಚ್ಚರಿಕೆಗೆ ಟಾಂಗ್ ನೀಡಿದ ಕೋಟಾ ಶ್ರೀನಿವಾಸ್- ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದಿರಾ? ನಮ್ಮ ಸರ್ಕಾರದಲ್ಲಿ ಇದಕ್ಕೆಲ್ಲ ಅವಕಾಶವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಟಾಂಗ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಪೊಲೀಸರಿಗೆ ಡಿ.ಕೆ. ಶಿವಕುಮಾರ್ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿದ್ದಾರೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇದವಿಲ್ಲ. ಕರ್ತವ್ಯದಲ್ಲಿದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ. ಡಿಕೆಶಿ ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.