Thursday, January 23, 2025
ಸುದ್ದಿ

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು. ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ವಾಹನ ಸವಾರರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ, ಚಾಮರಾಜನಗರ ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು, ಕೋಲಾರ. ತುಮಕೂರು, ಕಲಬುರಗಿ ಸೇರಿದಂತೆ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಕಡೆ ಮಳೆ ಅನಾಹುತ ಸಂಭವಿಸಿದೆ. ಬಳ್ಳಾರಿಯಲ್ಲಿ ನವರುಣನ ಆರ್ಭಟ ಜೋರಾಗಿದ್ದು, ಮನೆ ಗೋಡೆ ಕುಸಿದು ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.