Thursday, January 23, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ – ಮಾರಾಮಾರಿ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು ದಾಳಿ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್​​ ಹಾಗೂ ಮಾಣಿ ಮಂಜುನಾಥ್​ ಯಾನೆ ಮಂಜು ಹಾಗೂ ಪ್ರವೀಣ್​ ನಾಯ್ಕ್​ ಅಲಿಯಾಸ್​ ಮಹಾಲಿಂಗ ಎಂದು ಶಂಕಿಸಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ದಿನದಂದು ನಡೆದಿದ್ದ ಸಂಭ್ರಮಾಚರಣೆಗೆ ಪ್ರತೀಕಾರವಾಗಿ ಈ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್​ ನಾಯ್ಕ್​ ಎಂಬವರ ಮೇಲೆ ಈ ಮಾರಣಾಂತಿಕ ದಾಳಿ ನಡೆದಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಣಿ ಜಂಕ್ಷನ್​​ನಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಒಮ್ನಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಸ್ಕೂಟರ್​ಗೆ ಡಿಕ್ಕಿ ಹೊಡೆದು ಬಳಿಕನ ತಲವಾರಿನಿಂದ ದಾಳಿ ನಡೆಸಿದೆ ಎನ್ನಲಾಗಿದೆ. ಘಟನೆಯಲ್ಲಿ ಪ್ರಶಾಂತ್​ ಹಾಗೂ ಮಹೇಂದ್ರ ತಲೆ ಮತ್ತು ಕಾಲಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಪುತ್ತುರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು