Monday, November 25, 2024
ಸುದ್ದಿ

ಮಂಗಳೂರು ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಭಾರೀ ದುರಂತವೊoದು ತಪ್ಪಿಹೋಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಿoದ ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಇದಾಗಿದ್ದು, ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

ಇಂಡಿಗೋ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಇದನ್ನರಿತ ಪೈಲಟ್ ಭಾರೀ ದುರಂತವನ್ನು ತಪ್ಪಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ಹಕ್ಕಿ ಡಿಕ್ಕಿ ಹೊಡೆದೊಡನೆ ಪೈಲಟ್ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ್ದಾರೆ.

ನಂತರ ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿಳಿದಿದೆ. ಸದ್ಯ ಅಧಿಕಾರಿಗಳು ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡುತ್ತಿದ್ದಾರೆ. ಇನ್ನು ಪ್ರಯಾಣಿಕರಿಗಾಗಿ ಬೆಂಗಳೂರಿನಿoದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ವ್ಯವಸ್ಥೆ ಕಲ್ಪಿಸಲಾಗಿದೆ. ಹಕ್ಕಿ ಡಿಕ್ಕಿ ಪ್ರಕರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.