ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಪತ್ರದ ಮೂಲಕ ಕುಮಾರಸ್ವಾಮಿಯವರು ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಪತ್ರದಲ್ಲಿ ಮನವಿ ಮಾಡಿದ್ದು, ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತು, ಸೋಲೇ ಅಂತಿಮವಲ್ಲ ಎಂದ ತಿಳಿಸಿದ್ದು, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ನನ್ನ ಈ ನಿರ್ಧಾರವನ್ನು ತಾವು ಒಪ್ಪಿ ನವ ನಾಯಕತ್ವಕ್ಕೆ ಅನುವು ಮಾಡಿಕೊಟ್ಟು ಪಕ್ಷವನ್ನು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಿದೆ ಎನ್ನುವುದು ನನ್ನ ವಿನಮ್ರ ಸಲಹೆ ಮತ್ತು ಮನವಿ. ತಮ್ಮ ಹಾಗೂ ವರಿಷ್ಠರ ಆಶಯ, ಪಕ್ಷದ ಹಿತದೃಷ್ಟಿಯಿಂದ ಸಂಘಟನೆ ಕೆಲಸಕ್ಕೆ ನಾನು ಸದಾ ಸಿದ್ಧ. ಯುವ ಸಮುದಾಯದ ಜತೆ ಸೇರಿ ಪಕ್ಷ ಕಟ್ಟುವುದಕ್ಕೆ ನಾನೆಂದೂ ಹಿಂಜರಿಯುವುದಿಲ್ಲ.
ನನ್ನ ಭಾವನೆಗಳನ್ನು ತಾವು ಗೌರವಿಸುವಿರಿ ಎನ್ನುವ ವಿಶ್ವಾಸದೊಂದಿಗೆ.. ಇಷ್ಟು ದಿನ ನನ್ನೊಂದಿಗೆ ಶ್ರಮಿಸಿ ಪಕ್ಷಕ್ಕಾಗಿ ಹೆಗಲು ಕೊಟ್ಟ ಎಲ್ಲಾ ಹಿರಿ, ಕಿರಿಯರಿಗೆ ನನ್ನ ಗೌರವಪೂರ್ವಕ ನಮನಗಳು.” ಎಂದು ಬರೆದಿದ್ದಾರೆ.
ವಿಧಾನ ಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದರು. ಆದರೆ ಈ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದರು. ಇದೀಗ ಸೋಲಿನ ಬಳಿಕ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟಲು ಮುಂದಾಗಿದ್ದೇವೆ. ಸೋಲೇ ಅಂತಿಮವಲ್ಲ ಎಂದು ಹೇಳಿದ್ದಾರೆ.