Friday, January 24, 2025
ಸುದ್ದಿ

ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಹಿಂಜಾವೇ ಆಗ್ರಹ – ಕಹಳೆ ನ್ಯೂಸ್

ಬಂಟ್ವಾಳ: ಮಾಣಿಯಲ್ಲಿ ಬಿಜೆಪಿ ಹಾಗೂ ಬಜರಂಗದಳ ಸಂಚಾಲಕನ ಮೇಲಿನ ಹಲ್ಲೆ ಪ್ರಕರಣವನ್ನು ಪೆÇಲೀಸರು ಗಂಭೀರವಾಗಿ ಪರಿಗಣಿಸಿ ಶೀಘ್ರ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡರು ಆಗ್ರಹಿಸಿದ್ದಾರೆ.

ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಡೆದ ಸಂಭ್ರಮಾಚರಣೆ ವೇಳೆ ನಡೆದಿದ್ದ ಸಣ್ಣ ಜಗಳದ ಪ್ರತೀಕಾರವಾಗಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾರಣಾಂತಿಕ ಹಲ್ಲೆ ನಡೆದಿದೆ.3

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಆರೋಪಿಗಳ ಹೆಸರು ಸಹಿತ ಪೆÇಲೀಸರಿಗೆ ದೂರು ನೀಡಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು, ತಪ್ಪಿದಲ್ಲಿ ಪ್ರತಿಭಟನೆ ಸಹಿತ ಇನ್ನಿತರ ಘಟನೆಗಳಿಗೆ ಇಲಾಖೆ ನೇರ ಹೊಣೆಯಾಗುತ್ತದೆ ಎಂದು ಹಿಂಜಾವೇ ಜಿಲ್ಲಾ ಪ್ರಮುಖರು ಎಚ್ಚರಿಸಿದ್ದಾರೆ.