Saturday, January 25, 2025
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ರವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುಂಬರುವ ಮಳೆಗಾಲದಲ್ಲಿ ನಡೆಯಬಹುದಾದ ಪ್ರಕೃತಿ ವಿಕೋಪ ಮತ್ತು ಹಾನಿಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ, ಕಡಲ್ ಕೊರೆತ ತಡೆಗಟ್ಟುವಿಕೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಮೇಯರ್ ಜಯಾನಂದ ಅಂಚನ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಬಿ ಪಾಟೀಲ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ ಹೊಳ್ಳ, ಪಾಲಿಕೆ ಆಯುಕ್ತರಾದ ಶ್ರೀ ಚನ್ನ ಬಸಪ್ಪ, ಮ. ನ. ಪಾ ಸದಸ್ಯರುಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಇಂಜಿನಿಯರ್ ಗಳು, ಅರಣ್ಯ ಇಲಾಖೆ , ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.