Recent Posts

Monday, January 27, 2025
ಸುದ್ದಿ

ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ ನಷ್ಟ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿಬಾಕಿಮಾರ್ ಎಂಬಲ್ಲಿ ಸುಧಾಕರ್ ಶೆಟ್ಟಿ ಎಂಬವರ ಮನೆಗೆ ಮೇ.25 ರಂದು ಗುರುವಾರ ಮಧ್ಯ ರಾತ್ರಿ 12.30 ರ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ರೂ ನಷ್ಟ ಸಂಭವಿಸಿದೆ ಎಂದು ಹೇಳ ಮನೆಯಲ್ಲಿ ಮಲಗಿದ್ದ ವರಿಗೆ ಕೂಡಲೇ ಎಚ್ಚರವಾದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಮನೆಯ ಒಂದು ಪಾಶ್ವಭಾಗ ಬೆಂಕಿಗೆ ಅಹುತಿಯಾಗಿದೆ.ಕೂಡಲೇ ಸ್ಥಳೀಯ ಯುವಕರ ಸಹಾಯದಿಂದ ನೀರು ಹಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಲಾಗಿದೆ .ಹಾಗಾಗಿ ಹೆಚ್ಚಿನ ಅನಾಹುವನ್ನು ತಪ್ಪಿಸಲಾಗಿದೆ.

ಮನೆಯ ಅಡುಗೆ ತಯಾರಿಸುವ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರೊಳಗೆ ದಾಸ್ತಾನು ಮಾಡಲಾಗಿದ್ದ ಒಣ ಅಡಿಕೆ ಮತ್ತು ಬೆಲೆಬಾಳುವ ಮರದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಸ್ಥಳಕ್ಕೆ ತಾಲೂಕಿನ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.