Wednesday, November 27, 2024
ಸುದ್ದಿ

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ– ಕಹಳೆ ನ್ಯೂಸ್

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗ ನೀಡಲಾಗಿತ್ತು. ಆದ್ರೆ ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಕೆಲಸಕ್ಕೆ ಕುತ್ತು ಬಂದೊದಗಿದ್ದು, ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.ಅಂತೆಯೇ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಮುಂದಿನ ಕ್ರಮ ಏನು ಅನ್ನೋದನ್ನ ಕಾದು ನೋಡಬೇಕಾಗಿದೆ.