ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಉದ್ಯೋಗಕ್ಕೆ ಮರು ನೇಮಕ : ಸಿಎಂ ಸಿದ್ದರಾಮಯ್ಯ ಟ್ವೀಟ್ – ಕಹಳೆ ನ್ಯೂಸ್
ಸರ್ಕಾರ ಬದಲಾಗುತ್ತಿದ್ದಮತೆ ಉದ್ಯೋಗ ಕಳೆದುಕೊಂಡಿದ್ದು ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಸರ್ಕಾರ ಇದೀಗ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದೆ. ಈ ಮೂಲಕ ಮತ್ತೆ ಉದ್ಯೋಗ ನೀಡಿದೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಪರಿಣಾಮ ಹಿಂದಿನ ತಾತ್ಕಾಲಿಕ ನೇಮಕಾತಿಗಳು ರದ್ದುಗೊಂಡಿದ್ದವು. ಸರ್ಕಾರ ಬದಲಾದ ಕಾರಣ 150ಕ್ಕೂ ಹೆಚ್ಚು ಗುತ್ತಿಗೆ ನೌಕರರು ಕೆಲಸ ಕಳೆದುಕೊಂಡರು. ಈ ಪೈಕಿ ಬಿಜೆಪಿ ಮುಖಂಡ ದಿ. ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಕೂಡ ಒಬ್ಬರಾಗಿದ್ದರು.
ಅನುಕಂಪದ ಆಧಾರದ ಮೇರೆಗೆ ಹಿಂದಿನ ಸರ್ಕಾರದ ಸಿಎಂ ವಿಶೇಷ ಅಧಿಕಾರದಲ್ಲಿ ದಿ. ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಕುಮಾರಿ ಅವರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ್ದರು. ಸದ್ಯ ಸರ್ಕಾರ ಬದಲಾಗಿದ್ದು, ನೂತನ ಕುಮಾರಿ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದಿಗ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಈ ಸಂಬAಧ ಟ್ವೀಟ್ ಮಾಡಿದ ಸಿಎಂ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.