ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ 2 ಸಾವಿರ ರೂ. ನೋಟುಗಳನ್ನು ತೆಗೆದುಕೊಳ್ಳದೇ ಇರಲು ಆದೇಶಿಸಿಲ್ಲ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ಪಷ್ಟನೆ – ಕಹಳೆ ನ್ಯೂಸ್
ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ 2 ಸಾವಿರ ರೂ. ನೋಟುಗಳನ್ನು ತೆಗೆದುಕೊಳ್ಳದೇ ಇರಲು ಆದೇಶಿಸಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಯಿಂದ ಮಾಹಿತಿ ನೀಡಿದೆ. ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ ನಿರ್ವಾಹಕರಿಗೆ ರೂ.2,000 ನೋಟುಗಳನ್ನು ತೆಗೆದುಕೊಳ್ಳಬಾರದು ಎಂಬುದಾಗಿ ಎಲ್ಲಿಯೂ ಆದೇಶ ಮಾಡಿಲ್ಲ ಎಂದಿದೆ.
ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರಿಂದ 2 ಸಾವಿರ ರೂಪಾಯಿಯ ನೋಟುಗಳನ್ನು ತೆಗೆದುಕೊಳ್ಳದಂತೆ ನಿರ್ವಾಹಕರಿಗೆ ಸೂಚಿಸಲಾಗಿದೆ ಅನ್ನೋದು ಸುಳ್ಳು ಸುದ್ದಿ ಎಂದು ಅವರು ಹೇಳಿದ್ದಾರೆ. ಪ್ರಯಾಣಿಕರಿಂದ 2 ಸಾವಿರ ನೋಟುಗಳನ್ನು ಸಂಚಾರದ ವೇಳೆಯಲ್ಲಿ ನಿರ್ವಾಹಕರು ಸ್ವೀಕರಿಸುತ್ತಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದೆ.