Sunday, January 19, 2025
ಸುದ್ದಿ

ಎತ್ತಿನಹೊಳೆ ಯೋಜನೆ ; ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಹಸಿರುನ್ಯಾಯಾಧೀಕರಣ ಗ್ರೀನ್ ಸಿಗ್ನಲ್ !

ಬೆಂಗಳೂರು/ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. ಎತ್ತಿನಹೊಳೆ ವಿರುದ್ಧ ಸಲ್ಲಿಸಿರುವ ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

3 ಅರ್ಜಿಗಳಲ್ಲಿ ಒಂದು ಅರ್ಜಿ ವಿಚಾರಣೆ ನಡೆಸಿದ ಎನ್ ಜಿಟಿ ಇಂದು ಕೇವಲ ಒಂದು ಅರ್ಜಿಯ ಕುರಿತ ತೀರ್ಪು ಪ್ರಕಟಿಸಿದೆ. ಷರತ್ತುಗಳನ್ನು ಅಂತಿಮ ತೀರ್ಪಿನಲ್ಲಿ ಪ್ರಕಟಿಸುವುದಾಗಿ ಎನ್ ಜಿಟಿ ಪೀಠ ಸ್ಪಷ್ಟಪಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೇತ್ರಾವತಿ ನದಿ ತಿರುವು ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು, ಪರಿಸರವಾದಿಗಳು, ಬಿಜೆಪಿ ಸೇರಿದಂತೆ ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.

ಏನಿದು ಯೋಜನೆ?
ಕರ್ನಾಟಕ ಸರಕಾರ “ನೇತ್ರಾವತಿ /ನೇತ್ರಾವತಿ ನದಿ ತಿರುವು ಯೋಜನೆ”ಗೆ “ಎತ್ತಿನಹೊಳೆ ಯೋಜನೆ” ಎಂಬ ಹೆಸರಿನಲ್ಲಿ ಅಡಿಪಾಯ ಹಾಕಿದೆ. “ಕುಡಿಯುವ ನೀರಿನ ಯೋಜನೆ” ಎಂಬ ಹೆಸರಿನಲ್ಲಿ ಕೇಂದ್ರ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಕಾನೂನುಗಳಿಂದ ಪಾರಾಗಿ ಈ ಯೋಜನೆಯನ್ನು ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಕನೀನಿನಿಗೆ (ಕರ್ನಾಟಕ ನೀರಾವರಿ ನಿಗಮ ನಿಯಮಿತ) ವಹಿಸಲಾಗಿದೆ. (ಕರ್ನಾಟಕದಲ್ಲಿ ಸಾಮಾನ್ಯವಾಗಿ ಕುಡಿಯುವ ನೀರಿನ ಯೋಜನೆಗಳನ್ನುu ಕರ್ನಾಟಕ ನಗರ ನೀರುu ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಗತಗೊಳಿಸುತ್ತದೆ).

ರಾಜ್ಯದ ಪೂರ್ವ ಭಾಗದ ಜಿಲ್ಲೆಗಳಲ್ಲಿ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ, ಕುಡಿಯುವ ನೀರನ್ನು ಶೀಘ್ರವಾಗಿ ಒದಗಿಸುವ ದೃಷ್ಟಿಯಿಂದ ಯಾವುದೇ ಅಂತರರಾಜ್ಯ ವಿವಾದಗಳಿಲ್ಲದ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಸಮುದ್ರ ಸೇರುವ ಪಶ್ಚಿಮಘಟ್ಟದ ಮೇಲ್ಭಾಗದ ಹಳ್ಳಗಳ ಪ್ರವಾಹದ ನೀರನ್ನು ಈ ಭಾಗದ ಪ್ರದೇಶಗಳಿಗೆ (ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ) ಪೂರೈಸುವ ಯೋಜನೆ ಇದಾಗಿದೆ.

Leave a Response