ಉಡುಪಿ : ಮಲ್ಪೆ ಬೀಚ್ ಬಳಿ ರುದ್ರಭೂಮಿ ಅಭಿವೃದ್ಧಿಗೆ ಮಾಜಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಅವಧಿಯಲ್ಲಿ ಅವರ ಶಿಫಾರಸ್ಸಿನ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ. 10.00 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಯಶ್ ಪಾಲ್ ಸುವರ್ಣ ಅವರೊಂದಿಗೆ ಮಾಜಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆಯ ಮಾಜಿ ಸದಸ್ಯರಾದ ಪಾಂಡುರಂಗ ಮಲ್ಪೆ, ವಿಜಯ್ ಕುಂದರ್ ಉಪಸ್ಥಿತರಿದ್ದರು.