Thursday, January 23, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆಯಿಂದಲೇ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ – ಕಹಳೆ ನ್ಯೂಸ್

ಇನ್ಮುಂದೆ ರಾಜ್ಯದಲ್ಲಿ ಎಲ್ಲಾ ಹೆಣ್ಣುಮಕ್ಕಳು ಬಸ್‌ನಲ್ಲಿ ಪ್ರಯಾಣಿಸೋದಕ್ಕೆ ಟಿಕೆಟ್ ಖರೀದಿ ಮಾಡಬೇಕಿಲ್ಲ. ಹೌದು, ಕಾಂಗ್ರೆಸ್‌ನ ಫೇಮಸ್ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ನಾಳೆಯಿಂದಲೇ ಜಾರಿಯಾಗಲಿದೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆ ಚರ್ಚೆ ನಡೆಸಿದ್ದೇವೆ, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ಆಗಿದೆ, ಸಿಎಂ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು