Thursday, January 23, 2025
ಸುದ್ದಿ

ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದರ ಮುಖ್ಯಸ್ಥರಾದ ಮೌರಿಸ್ ಡಿಸೋಜಾರವರಿಗೆ ಇಂದು ಬೀಳ್ಕೊಡುಗೆ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿ ಇಂದು ಸತತವಾಗಿ ೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದಂತಹ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಮೌರಿಸ್ ಡಿಸೋಜಾ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಹಲವು ವರ್ಷಗಳ ಕಾಲ ತಮ್ಮ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದಂತಹ ,ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾದಂತಹ ಮೌರಿಸ್ ಡಿಸೋಜ ಇವರನ್ನು ಸಂಸ್ಥೆಯ ಅಧ್ಯಕ್ಷರು ಶಿಕ್ಷಕರು ಪ್ರೀತಿಯಿಂದ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಅಂಚನ್ ,ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ್ ಅಂಚನ್ ,ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ರಾಮಚಂದ್ರ ಕರೆಂಕಿ ,ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ರಮಾನಂದ, ಸಂಸ್ಥೆಯ ಶಿಕ್ಷಕರಾದ ಕವಿತಾ ಕೆ , ವಿನ್ನಿಸಿಂಥಿಯಾ, ಹಿಲ್ಡಾ ಫೆರ್ನಾಂಡಿಸ್, ಉಮಾವತಿ, ಶಿಕ್ಷಕ ವೃಂದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು,ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು .