Saturday, November 23, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಮಿಂಚಿನ ಕಾರ್ಯಾಚರಣೆ ; ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ – ಭಯೋತ್ಪಾದಕ ಜಿಹಾದಿಗಳ ಹೆಡೆಮುರಿಕಟ್ಟಿದ ಅಧಿಕಾರಿಗಳು – ಕಹಳೆ ನ್ಯೂಸ್

NIA raids: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಮಿಂಚಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ.

ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ರೇಡ್ ಮಾಡಲಾಗಿದೆ. ಎನ್ಐಎ ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ ಭೇದಿಸುತ್ತಿದೆ. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಫುಲ್ವಾರಿ ಶರೀಫ್ ಪ್ರಕರಣ ಪತ್ತೆಯಾಗಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ದೇಶದಲ್ಲಿ ಕೋಮು ಗಲಭೆ ಸೃಷ್ಠಿಸಲು ಯತ್ನ ಆರೋಪದ ಮೇಲೆ ಈ ಪ್ರಕರಣ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಎನ್ಐಎ ಅಧಿಕಾರಿಗಳ ತಂಡ ಆಗಮಿಸಿದೆ.

ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ರನ್ನು ಅಧಿಕಾರಿಗಳು ಬಂಧಿಸಿದ್ದರು. ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ದಾಳಿ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆ ಪತ್ತೆಹಚ್ಚಲಾಗಿತ್ತು