Friday, January 24, 2025
ಸುದ್ದಿ

ಮಕ್ಕಳ ಬಿಸಿಯೂಟದಲ್ಲಿ ಪತ್ತೆಯಾದ ಹಾವು : ಮಕ್ಕಳ ಆರೋಗ್ಯದಲ್ಲಿ ಏರು ಪೇರು –ಕಹಳೆ ನ್ಯೂಸ್

ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಪತ್ತೆಯಾದ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್ ಜಿಒವೊಂದು ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ‘ಖಿಚಡಿ ʼಯನ್ನು ಬಡಿಸಿದ್ದು, ಒಂದು ಪ್ಲೇಟ್ ನಲ್ಲಿ ಹಾವು ಪತ್ತೆಯಾಗಿದೆ.
ಕೂಡಲೇ ʼಖಿಚಡಿʼ ನೀಡುವುದನ್ನು ನಿಲ್ಲಿಸಿದ್ದಾರೆ. ಆದರೆ ಈ ವೇಳೆಗಾಗಲೇ ಹಲವು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿದ್ಯಾರ್ಥಿಗಳು ಅಸ್ವಸ್ಥಗೊಂಡು ವಾಂತಿ ಮಾಡಲು ಶುರು ಮಾಡಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಎಸ್‌ಡಿಎಂ, ಎಸ್‌ಡಿಒ ಮತ್ತು ಡಿಎಸ್‌ಪಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.

100 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ʼಖಿಚಡಿʼ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಆದರೆ ಅಧಿಕಾರಿಗಳು ಕೇವಲ 25 ವಿದ್ಯಾರ್ಥಿಗಳು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದಕ್ಕೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ಗ್ರಾಮಸ್ಥರು ಶಾಲೆಯ ಬಳಿ ಹೋಗಿ, ಪ್ರತಿಭಟನೆ ನಡೆಸಿ, ಮುಖ್ಯ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ