Friday, January 24, 2025
ಸುದ್ದಿ

ತುಳುವರಲ್ಲಿ ಮತ್ತೆ ಚಿಗುರೊಡೆದ ನಿರೀಕ್ಷೆ : ತುಳುವಿಗೆ ರಾಜ್ಯ ಭಾಷೆ ಸ್ಥಾನ..?! –ಕಹಳೆ ನ್ಯೂಸ್

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದಕ್ಕೆ ಪೂರಕವಾಗಿ ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕು ಎಂಬ ತುಳುನಾಡಿಗರ ಬೇಡಿಕೆ ಇನ್ನೂ ಈಡೇರಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ರಚಿಸಿದ ಸಮಿತಿಯ ವರದಿಯೇ ಬಹಿರಂಗಗೊoಡಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಸರಕಾರದ ಅವಧಿಯಲ್ಲಿ ಕರಾವಳಿಗರೇ ಆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮೇಲೆ ತುಳುನಾಡಿಗರಿಗೆ ಅಪಾರ ನಿರೀಕ್ಷೆ ಇತ್ತು. ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸುವ ಭರವಸೆಯನ್ನೂ ನೀಡಿದ್ದರು. ಆದರೆ ಈಡೇರಲಿಲ್ಲ. ಇದೀಗ ಕಾಂಗ್ರೆಸ್ ನೂತನ ಸರಕಾರ ರಚನೆಯಾಗಿದ್ದು, ಮಂತ್ರಿಮoಡಲವೂ ಅಸ್ತಿತ್ವಕ್ಕೆ ಬಂದಿದೆ. ಈಗ ಮತ್ತೆ ತುಳುನಾಡಿಗರ ಕೂಗು ಮುನ್ನೆಲೆಗೆ ಬಂದಿದೆ.

ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದಕ್ಕೆ ಸಂಬoಧಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಸರಕಾರವು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಅಧ್ಯಯನ ನಡೆಸಿ ವಿಸ್ಕೃತ ವರದಿಯನ್ನು ಕೆಲವು ತಿಂಗಳ ಹಿಂದೆಯೇ ಸಲ್ಲಿಸಿತ್ತು. ಬಳಿಕ ಚುನಾವಣೆ ವಿಚಾರ ಮುನ್ನೆಲೆಗೆ ಬಂದ ಕಾರಣ ಆ ವರದಿ ಮೂಲೆಗೆ ಸೇರಿದೆ. ಇದೀಗ ನೂತನ ಸರಕಾರ ಅಧಿಕಾರ ವಹಿಸಿಕೊಂಡಿದ್ದು, ಈ ವರದಿ ಮುನ್ನೆಲೆಗೆ ಬರುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಸ್ಪೀಕರ್ ಖಾದರ್ ಮೇಲೆ ತುಳುನಾಡಿನ ಜನರಿಗೆ ಹೆಚ್ಚಿನ ನಿರೀಕ್ಷೆಯಿದೆ. ಏಕೆಂದರೆ ತುಳು ರಾಜ್ಯ ಭಾಷೆಯಾಗಬೇಕು ಎಂಬ ಆಗ್ರಹಿಸಿದವರಲ್ಲಿ ಈಗ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಕೂಡ ಒಬ್ಬರು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ತುಳು ಭಾಷೆ ಸ್ಥಾನಮಾನಕ್ಕೆ ಒತ್ತಾಯ ಮಾಡಿ “ತುಳು ಭಾಷೆ ಜಿಲ್ಲೆಯ ದೈವ ದೇವರು ಮಾತನಾಡುವ ಭಾಷೆಯಾಗಿದೆ. ಈ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ, ಸಾಂಸ್ಕೃತಿಕ ನೆಲೆಗಟ್ಟು, ಸ್ವಂತ ಅಕಾಡೆಮಿ ಇದೆ. ರಾಜ್ಯ ಸರಕಾರ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಅನೇಕ ವರ್ಷಗಳ ಇತಿಹಾಸ, ಸಾಹಿತ್ಯ, ಲಿಪಿ ಇರುವ ತುಳು ಭಾಷೆ ಅಧ್ಯಯನಕ್ಕೆ ಸಮಿತಿ ರಚಿಸಿ ಬಳಿಕ ಘೋಷಣೆ ಸರಿಯಲ್ಲ’ ಎಂದಿದ್ದರು.