Thursday, January 23, 2025
ಸುದ್ದಿ

ಕಡೇಶಿವಾಲಯ ದ. ಕ. ಜಿ. ಪಂ. ಹಿ. ಪ್ರಾ. ಶಾಲೆಯ ಪ್ರಾರಂಭೋತ್ಸವ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ದ. ಕ. ಜಿ. ಪಂ. ಹಿ. ಪ್ರಾ ಶಾಲೆ ಕಡೇಶಿವಾಲಯ ಇಲ್ಲಿ ಶಾಲಾ ಪ್ರಾರಂಭೋತ್ಸವ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀಯುತ ಹರಿಶ್ಚಂದ್ರರವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯಅತಿಥಿಗಳಾಗಿ ಕಡೇಶಿವಾಲಯ ಗ್ರಾಮ ಪಂಚಾಯತನ ಸದಸ್ಯರಾದ ಸುರೇಶ್ ಕನ್ನೊಟು ಇವರು ಹೊಸದಾಗಿ ಸೇರಿದ ಶಾಲಾ ಮಕ್ಕಳನ್ನು ಹೂಗುಚ್ಛ ನೀಡುವುದರೊಂದಿಗೆ ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸರಕಾರದಿಂದ ನೀಡಲ್ಪಟ್ಟ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲೆಯನ್ನು ತಲ್ಲಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮಧ್ಯಾಹ್ನ ಮಕ್ಕಳಿಗೆ ಸಿಹಿ ಊಟ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕ ಶ್ರೀಯುತ ಬಾಬು ಪೂಜಾರಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಬಾಳ್ತಿಲ ಮತ್ತು ಮಾಣಿ ಕ್ಲಸ್ಟರಿನ ಸಿ. ಆರ್. ಪಿ ಯವರಾದ ಸತೀಶ್ ರಾವ್ ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳು ಪೋಷಕರು ಎಸ್. ಡಿ. ಎಂ. ಸಿ ಸದಸ್ಯರು ಆಂಗ್ಲ ಮಾಧ್ಯಮ ವಿದ್ಯಾವರ್ಧಕ ಸಂಘದ ಸದಸ್ಯರು ಹಾಜರಿದ್ದರು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು