Monday, November 25, 2024
ಬೆಂಗಳೂರುರಾಜ್ಯಸುದ್ದಿ

ದಕ್ಷಿಣ ಒಳನಾಡು, ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ. ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ. ರಾಜ್ಯದ ಕೆಲವೆಡೆ 3 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ವಿವಿಧೆಡೆ ಮಳೆ: ಮಂಗಳವಾರ ರಾಮನಗರದಲ್ಲಿ 8 ಸೆಂ.ಮೀ., ಬೆಂಗಳೂರು ನಗರದಲ್ಲಿ 7 ಸೆಂ.ಮೀ. ಮಳೆಯಾಗಿದೆ. ಕೊಡಗಿನಲ್ಲಿ 5, ರಾಮನಗರದಲ್ಲಿ 4 ಸೆಂ.ಮೀ. ಮಳೆಯಾಗಿದೆ.