Thursday, January 23, 2025
ಉಡುಪಿಕ್ರೈಮ್ಸುದ್ದಿ

ಮಣಿಪಾಲದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ : ಆರೋಪಿ ಪಯಾಜ್‌ ಪರಾರಿ – ಕಹಳೆ ನ್ಯೂಸ್

ಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಲಾಗಿದೆ.

ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಆರೋಪಿಗಳಾದ ಪಯಾಜ್‌ ಮತ್ತು ಸಚಿನ್‌ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು