Saturday, November 23, 2024
ಸುದ್ದಿ

ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅಸ್ತು – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮಹಿಳೆಯರಿಗೆ ಪ್ರವೇಶ ನಿರಾಕರಣೆ ಅಸಿಂಧು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮಹಿಳೆಯರು ಅಬಲೆ ಅಲ್ಲ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಪೀಠ, ಶತಮಾನಗಳಿಂದ ಮಹಿಳೆ ಮೇಲೆ ಶೋಷಣೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಯ್ಯಪ್ಪ ಭಕ್ತರು ಪ್ರತ್ಯೇಕ ಧಾರ್ಮಿಕ ಪಂಗಡವಲ್ಲ. ಮಹಿಳೆಯರಿಗೆ ಪ್ರವೇಶವನ್ನು ನಿರಾಕರಿಸುವುದು ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ. ಪ್ರವೇಶವನ್ನು ನಿಷೇಧಿಸುವುದು ಧಾರ್ಮಿಕ ವಿಶ್ವಾಸದ ಭಾಗವೂ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯರ ಕುರಿತಾದ ಈ ಅಸಮಾನತೆ ಬದಲಾಗಬೇಕಿದ್ದು, ಸಮಾಜ ಈ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡಬೇಕು ಎಂದು ಪೀಠ ಹೇಳಿದೆ. ಈ ನಿಟ್ಟಿನಲ್ಲಿ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯ ಪ್ರವೇಶ ನಿರಾಕರಣೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಇದೇ ವೇಳೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅಸ್ತು ಎಂದಿದ್ದು, ಶಾರೀರಿಕ ಬದಲಾವಣೆಗಳು ನಂಬಿಕೆ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ 10-50 ವರ್ಷದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಈ ಹಿಂದೆ ಇದ್ದ ನಿರ್ಬಂಧವನ್ನು ತೆಗೆದು ಹಾಕಿದೆ.