Thursday, January 23, 2025
ಸುದ್ದಿ

ಪೆರ್ನಾಜೆ ಶ್ರೀ ಪದವಿಪೂರ್ವ ಕಾಲೇಜು ಪ್ರೌಡಶಾಲಾವಿಭಾಗದ ಪ್ರಾರಂಭೋತ್ಸವ -2023-24 – ಕಹಳೆ ನ್ಯೂಸ್

ಪೆರ್ನಾಜೆ: ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದಲ್ಲಿ ಮೇ 31 ರಂದು ಶಾಲಾ ಪ್ರಾರಂಭೋತ್ಸವ ನಡೆಯಿತು.
ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರು ಮತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಪೆರ್ನಾಜೆ ಶಂಕರನಾರಾಯಣಭಟ್ ರವರು ಜ್ಯೋತಿ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಮಳಿ ರಾಮಚಂದ್ರ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು, ಕಾಲೇಜು ವಿಭಾಗದ ಪ್ರಾಚಾರ್ಯರಾದ ಶ್ರೀ ಮ೦ಟಯ್ಯರವರು ಪ್ರಾರಂಭೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಹಿತನುಡಿದರು.
ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತರವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ ವೃಂದ, ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು