Thursday, January 23, 2025
ಸುದ್ದಿ

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ ಬಳ್ಳಾರಿಯಲ್ಲಿ ಪತ್ತೆ – ಕಹಳೆ ನ್ಯೂಸ್

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35 ) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬAಧಿಕರು ಬಳ್ಳಾರಿಗೆ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ.30ರಂದು ಗರ್ಭಿಣಿ ಪತ್ನಿ ಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ನ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದಾರೆ.

ನಂತರ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದರು.

ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆಮಂದಿ ನಾಪತ್ತೆ ದೂರು ದಾಖಲಿಸಿದ್ದರು. ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ.31ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲವೂ ಪತ್ತೆಯಾಗಿತ್ತು.

ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇಂದು ಮಧ್ಯಾಹ್ನ ಹೊತ್ತಿಗೆ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು, ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬAಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.