Thursday, January 23, 2025
ಸುದ್ದಿ

ಸುಬ್ರಹ್ಮಣ್ಯ:ವಿದ್ಯಾರ್ಥಿಗಳ ಮೇಲೆ ಹರಿದ ಕಾರು : ಮೂವರು ವಿಧ್ಯಾರ್ಥಿನಿಯರು ಪುತ್ತೂರು ಆಸ್ಪತ್ರೆಗೆ ದಾಖಲು –ಕಹಳೆ ನ್ಯೂಸ್ 

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಡೆದಿದೆ

ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದ ವಿದ್ಯಾರ್ಥಿನಿಯರು ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಅವರುಗಳನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಇನ್ನುಳಿದ 3- 4 ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯ ಆಗಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿಕೊಂಡು, ಕಾರನ್ನು ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ