Thursday, January 23, 2025
ಸುದ್ದಿ

ಕಾಡಾನೆ ದಂತದಿಂದ ತಿವಿದು ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್‌ಗೆ ಹಾನಿ –ಕಹಳೆ ನ್ಯೂಸ್

ಕಡಬ : ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಜೂ.01ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ ಬದಿ ಕಾಡಾನೆ ನಿಂತಿತ್ತು. ಆನೆಯನ್ನು ನೋಡಿದ ಬಸ್ ಚಾಲಕ ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೂ ಕಾಡಾನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು