Thursday, January 23, 2025
ಸುದ್ದಿ

ವಿದ್ಯಾರ್ಥಿನಿಯ ಜೊತೆ ಅನ್ಯಕೋಮಿನ ವಿದ್ಯಾರ್ಥಿಗಳ ಸಮುದ್ರ ವಿಹಾರ ; ವಿದ್ಯಾರ್ಥಿಗಳ ಮೇಲೆ ಹಲ್ಲೆ -ಕಹಳೆ ನ್ಯೂಸ್

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಮೂವರು ವಿದ್ಯಾರ್ಥಿನಿಯರೊಂದಿಗೆ ಆಗಮಿಸಿದ ಅನ್ಯ ಕೋಮಿನ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊAದು ದಾಳಿ ನಡೆಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.

ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊAದು ಇವರನ್ನು ಹಿಂಬಾಲಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಇದರಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸು ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು