ರಾಜ್ಯದ ಜನತೆಗೆ 200 ಯುನಿಟ್ ವರೆಗೆ ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ; ಸಂಪುಟ ಸಭೆ ಬಳಿಕ ಸಿಎಂ ಘೋಷಣೆ –ಕಹಳೆ ನ್ಯೂಸ್
ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ 3 ಯೋಜನೆಗಳನ್ನು ಜಾರಿಗೆ ತರಲಾಗಿದೆ. ಉಳಿದ 2 ಯೋಜನೆಗಳನ್ನು ಆಗಸ್ಟ್ 15ರಂದು ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆ ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ. ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೆ ಈ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಹೇಳಿದ್ದಾರೆ.
ಎಲ್ಲರ ಮನೆಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಘೋಷಿಸಿದೆ. ಜೂನ್ 11ರಿಂದ ಮಹಿಳೆಯರು ಕಿಲೋ ಮೀಟರ್ ಮಿತಿಯಿಲ್ಲದೆ ಕೆಂಪು ಬಸ್ಗಳಲ್ಲಿ ಉಚಿತವಾಗಿ ಓಡಾಡಬಹುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.