Monday, November 25, 2024
ಸುದ್ದಿ

ಕಾಪು ತಾಲೂಕು ಎಲ್ಲೂರು ಗ್ರಾಮದಲ್ಲಿ ಗೋ ರುದ್ರಭೂಮಿ ನಿರ್ಮಾಣ : ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ –ಕಹಳೆ ನ್ಯೂಸ್

ಕಾಪು : ಕಾಪು ತಾಲೂಕು ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಸಲಾಗಿದ್ದು, ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಯೋಜನೆ ಇಂದು ನನಸಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಎಲ್ಲರೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಜಯಂತ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಶವ ಮೋಯ್ಲಿ, ಕಾಪು ತಹಶೀಲ್ದಾರರಾದ ಶ್ರೀನಿವಾಸ ಕುಲಕರ್ಣಿ, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.