ಪುತ್ತೂರು: ಆಸ್ತಿ ವಿಚಾರದಲ್ಲಿ ತಂದೆಯನ್ನೇ ಕೊಲೆ ಮಾಡಿದ ಆರೋಪಿ ಪುತ್ರನಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಹಿರೇಬಂಡಾಡಿ ರಾಮನಗರ ಕುದ್ಲೂರು ನಿವಾಸಿ ಅಬೂಬಕರ್ ಯಾನೆ ಮೋನು ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. 2017ರ ಜನವರಿ 14 ರಂದು ಉಪ್ಪಿನಂಗಡಿಯ ಹಳೆ ಬಸ್ಸು ನಿಲ್ದಾಣದಲ್ಲಿ ತಂದೆ ಮತ್ತು ಮಗನ ನಡುವೆ ವಾಗ್ವಾದ ನಡೆದಿತ್ತು.
ಈ ಸಂದರ್ಭ ತಂದೆ ಆದಂ ಪುತ್ರ ಅಬೂಬಕರ್ ಕಬ್ಬಿಣದ ರಾಡ್‌ನಿಂದ ತಲೆಗೆ ಬಲವಾಗಿ ಹಲ್ಲೆ ನಡೆಸಿದ್ದ, ಗಂಭೀರ ಗಾಯಗೊಂಡ ಆದಂ ಅವರನ್ನು ಆಸ್ಪತ್ರೆಗೆ ದಾಕಲು ಮಾಡಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಆರೋಪಿ ವಿರುದ್ಧ ಉಪ್ಪಿನಂಗಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ನ್ಯಾಯಾಲಯ 23 ಸಾಕ್ಷಿಗಳ ವಿಚಾರಣೆ ಹಾಗೂ 31 ದಾಖಲೆಗಳನ್ನು ಪರಿಶೀಲನೆ ನಡೆಸಿ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿ ಕಠಿಣ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೆ, 6 ತಿಂಗಳು ಸಾದಾ ಶಿಕ್ಷೆ ಎದುರಿಸುವಂತೆ ತೀರ್ಪಿನಲ್ಲಿ ಹೇಳಲಾಗಿದೆ.