Thursday, January 23, 2025
ಸುದ್ದಿ

ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ 30 ಕೋಟಿ ರೂ. ನೆರವು ನೀಡಿದ್ರಾ ವಿರಾಟ್ ಕೊಹ್ಲಿ? ಅಸಲಿ ಸಂಗತಿಯೇನು..? – ಕಹಳೆ ನ್ಯೂಸ್

ಒಡಿಶಾ ರೈಲು ದುರಂತವು ಇಡೀ ದೇಶದ ಜನತೆಯನ್ನು ದುಃಖದಲ್ಲಿ ಮುಳುಗಿಸಿದೆ. ಈ ಅವಘಡದಿಂದ 288 ಮಂದಿ ಸಾವು ಹಾಗೂ 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಳಿತಪ್ಪಿ ಸಂಭವಿಸಿದ ರೈಲು ದುರಂತದಿAದ ಅನೇಕರ ಬದುಕು ಸಹ ಹಳಿತಪ್ಪಿದ್ದು, ಇದರ ನೋವಿನಿಂದ ದೇಶದ ಜನತೆ ಇನ್ನು ಹೊರಬಂದಿಲ್ಲ. ಇದರ ನಡುವೆ ಇದೇ ಘಟನೆಯನ್ನು ಆಧಾರವಾಗಿಟ್ಟುಕೊಂಡು ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ.

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಷ್ಟೇ ಅಲ್ಲದೆ, ಅನೇಕ ಮೊಬೈಲ್ ವಾಟ್ಸ್ಆಯಪ್ ಸ್ಟೇಟಸ್‌ಗಳಲ್ಲಿ ಮೋದಿ ಅವರನ್ನು ಕೊಂಡಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ರೆ ಕೊಹ್ಲಿ ಯಾವುದೇ ನೆರವು ಘೋಷಣೆ ಮಾಡಿಲ್ಲ. ಬದಲಾಗಿ ಅವರು ರೈಲು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಹಣದ ನೆರವು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಾಧಾರಗಳು ಇಲ್ಲ. ಒಡಿಶಾ ರೈಲು ದುರಂತದ ಬಗ್ಗೆ ಕೇಳಿ ಅತೀವ ದುಃಖವಾಯಿತು. ತಮ್ಮ ಕುಟುಂಬದ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಆ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಕೊಹ್ಲಿ ಟ್ವೀಟ್ ಮಾಡಿದ್ದರು. ಆದರೆ, ಕೊಹ್ಲಿ, ನೆರವು ನೀಡಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ತಪ್ಪು ಮಾಹಿತಿ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು