Friday, January 24, 2025
ಸುದ್ದಿ

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಕೇಸ್ ಹಿಂಪಡೆಯುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಹಾಗೂ  ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಎಲ್ಲಾ ಕೇಸುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ‌ ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಅನೇಕ ರಾಜಕೀಯ ಪ್ರೇರಿತ ಪ್ರಕರಣಗಳನ್ನು ವಿವಿಧ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಬಿಜೆಪಿ ಸರಕಾರದ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ, ಧರಣಿ ಹಾಗೂ ಪ್ರತಿಭಟನಾ ರ್ಯಾಲಿಗಳನ್ನು ಮಾಡುವ ವೇಳೆ ಅವರ ವಿರುದ್ದ ರಾಜಕೀಯ ಪ್ರೇರಿತ ವಾಗಿ ಕೇಸುಗಳನ್ನು ದಾಖಲಿಸಲಾಗಿದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾದ ಎಲ್ಲಾ ಕೇಸುಗಳನ್ನು ಮರು ತನಿಖೆ ಮಾಡಬೇಕು ಮತ್ತು ಅವರ ಮೇಲಿನ ಕೇಸುಗಳನ್ನು ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.