Thursday, January 23, 2025
ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆ – ಕಹಳೆ ನ್ಯೂಸ್

ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಪಾತ್ರವು ಮಹತ್ವದ್ದಾಗಿರುತ್ತದೆ.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಸಾಧನೆಗಳ ವಿಶ್ಲೇಷಣೆಗೆ ಪೂರಕವಾದ ,ವಿದ್ಯಾರ್ಥಿಗಳ ವರ್ತನೆ,ನೈತಿಕತೆ,ಕಲಿಕಾ ಪ್ರಗತಿಗೆ ಪೂರಕವಾದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮಗಳನ್ನು ತೆಗೆದುಕೊಳ್ಳಬೇಕು.ಇದು ದೇಶದ ಸುಂದರ ಭವಿಷ್ಯ ನಿರ್ಮಾಣದ ಹೆಜ್ಜೆಗಳಾಗಲಿ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕರ‍್ಯದರ್ಶಿಗಳಾದ ಶ್ರೀಮತಿ ರೂಪಲೇಖರವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು


ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯರವರು ಮಾತನಾಡಿ, ಇಂತಹ ಸಭೆಗಳು ಶಿಕ್ಷಣ ಮತ್ತು ಪಾಲನೆಯ ವಿಷಯಗಳಲ್ಲಿ ಪೋಷಕರ ಉಪಕ್ರಮವನ್ನು ಹೆಚ್ಚಿಸುತ್ತದೆ.ಪೋಷಕರು ಮಕ್ಕಳ ಕಲಿಕೆಗೆ ವಿಶೇಷ ಗಮನ ನೀಡಿದಲ್ಲಿ ಅವರ ಉಜ್ವಲ ಭವಿಷ್ಯದ ಯಶಸ್ಸಿನ ಮಾರ್ಗ ಸುಲಭವಾಗುತ್ತದೆ. ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು ಮಾತನಾಡಿ,ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಬದುಕಲು ಬೇಕಾಗುವ ಕೌಶಲಗಳನ್ನು , ಸಕರಾತ್ಮಕ ವ್ಯಕ್ತಿತ್ವವನ್ನು ರೂಪುಗೊಳಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿರುತ್ತದೆ.ದೇಶದ ಭವಿಷ್ಯವಾದ ಯುವ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಉತ್ತಮ ವಾತಾವರಣ ಹಾಗೂ ಪೂರಕ ವೇದಿಕೆ ಒದಗಿಸಲು ಶಿಕ್ಷಕರ ಜೊತೆಗೆ ಪೋಷಕರ ಪಾತ್ರವೂ ಮಹತ್ವದ್ದಾಗಿದೆ. ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳ ,ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯನ್ನು ನೆನಪಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು.
ಕರ‍್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು,ಎಲ್ಲಾ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರು,ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.