Thursday, January 23, 2025
ಸುದ್ದಿ

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಬಡಗ ಕಾರಂದೂರಿನ ಸೂರಜ್ ಹೆಚ್ ಪೂಜಾರಿ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ರಾಜ್ಯಕ್ಕೆ 20ನೇ ರಾಂಕ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರಾಂಕ್ 2021 ರ ಡಿಸೆಂಬರ್ ನಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಪಿಡಬ್ಲ್ಯೂಡಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 20ನೇ ರ್ಯಾಂಕ್ ಪಡೆದು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರ್ಯಾಂಕ್ ಪಡೆದಿದ್ದಾರೆ.

ಪ್ರಸ್ತುತ ಕಾರವಾರ ಜಿಲ್ಲೆಯ ಭಟ್ಕಳ ತಾಲೂಕಿನ ಪಿಡಬ್ಲ್ಯೂಡಿ ಉಪವಿಭಾಗಕ್ಕೆ ಕಿರಿಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಲು ಸರ್ಕಾರ ಸ್ಥಳ ನಿಯೋಜಿಸಿದೆ. ಇವರು ಬಡಗ ಕಾರಂದೂರು ಗ್ರಾಮದ ಹಾನಿಂಜ ದಿವಂಗತ ವಾಸು ಪೂಜಾರಿ ಮತ್ತು ಶ್ರೀಮತಿ ಸುಂದರಿ ಇವರ ಸುಪುತ್ರನಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು