Friday, January 24, 2025
ಸುದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ –ಕಹಳೆ ನ್ಯೂಸ್

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ವಿಧಾನಸೌಧ ಎದುರು ನಡೆದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ. ಸುಮಿತ್ರಾ, ರಾಧಾ, ಪ್ರೇಮಾ, ಕಲಾವತಿ, ಪವಿತ್ರಾ ಅವರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು