Friday, January 24, 2025
ಸುದ್ದಿ

ಉಡುಪಿಯಲ್ಲಿ ಶಕ್ತಿ ಯೋಜನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ – ಕಹಳೆ ನ್ಯೂಸ್

ಉಡುಪಿ : ರಾಜ್ಯದ‌ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿಯ ಕೆಎಸ್ಸಾರ್ಟಿಸಿ ಡಾ. ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ  ಚಾಲನೆ ನೀಡಿದರು.

ಶಕ್ತಿ ಯೋಜನೆ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಅನುಕೂಲವಾಗಲಿದೆ‌. ವಿದ್ಯಾರ್ಥಿನಿಯರು ಸಹಿತವಾಗಿ ಮಹಿಳೆಯರು ಇದರ ಅನುಕೂಲ ಪಡೆಯಬಹುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕ ಯಶ್ ಪಾಲ್ ಸುವರ್ಣ, ಎಂಎಲ್ ಸಿ ಮಂಜುನಾಥ ಭಂಡಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಸರಳಾ ಕಾಂಚನ್, ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿ.ಪಂ. ಸಿಇಒ ಪ್ರಸನ್ನ ಎಚ್., ಎಸ್ ಪಿ ಹಾಕೈ ಅಕ್ಷಯ್ ಮಚ್ಚೀಂದ್ರ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು